July 9, 2026
Thursday, July 9, 2026
spot_img

ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಲಾರಿ ಮುಖಾಮುಖಿ, 6 ಜನರ ದಾರುಣ ಸಾ*ವು

ಹೊಸದಿಗಂತ ವರದಿ ಕಾರವಾರ:

ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.

ಧಾರವಾಡ ಮೂಲದ ಬಸವರಾಜ, ಆಭಿಷೇಕ,ಅಕ್ಷಯ,ಅಭಿಷೇಕ, ಸಂಜಯ,ಮಂಜುನಾಥ ಮತ್ತು ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನಬಸು, ಸಚಿನ್ ಎನ್ನುವವರು ಗಾಯಗೊಂಡಿದ್ದಾರೆ.

ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕ್ರೂಸರ್ ವಾಹನ ಯಲ್ಲಾಪುರ ಆರ್ತಿಬೈಲ್ ಬಳಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ಸಂಪೂರ್ಣ ನುಜ್ಜಾಗಿದ್ದು ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಅಪಘಾತದ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !