July 9, 2026
Thursday, July 9, 2026
spot_img

ಅಕ್ರಮ ಗ್ಯಾಸ್ ಸಿಲಿಂಡರ್ ಮಾರಾಟ ಜಾಲ ಬಯಲು: 10 ಸಿಲಿಂಡರ್ ವಶ, ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಕಲಬುರಗಿ:

ಅಕ್ರಮವಾಗಿ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಕಲಬುರಗಿ ಜಿಲ್ಲಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 10 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ತಿಳಿಸಿದ್ದಾರೆ.

ಜುಲೈ 5ರಂದು ಫಿರ್ಯಾದಿ ವೈಜನಾಥ್ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳಾದ ಆನಂದ್ ಹಾಗೂ ಭಗವಾನ್ ಎಂಬುವರು ಗೃಹಬಳಕೆಯ ಇಂಡಿಯನ್ ಆಯಿಲ್ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರೆಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದರು.

ದಾಳಿಯ ವೇಳೆ 14 ಕೆಜಿ 5 ಕೆ.ಜಿ. ತೂಕದ ಗ್ಯಾಸ್ ಸಿಲಿಂಡರ್‌ಗಳು ಹಾಗೂ 10 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 27,500 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 120/2026ರಡಿ ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಪ್ರಕರಣದ ತನಿಖೆಯ ವೇಳೆ ಇಬ್ಬರು ಆರೋಪಿಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಬ್ರಹ್ಮಪುರ, ಶಹಾಬಾದ್, ದಾರಾಶೀರ, ಸೇಡಂ, ಚಿತ್ತಾಪುರ, ರಾಘವೇಂದ್ರ ನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 21 ಕಳವು ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !