April 28, 2026
Tuesday, April 28, 2026
spot_img

5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆಯನ್ನೇ ಕಿತ್ತ 6 ವರ್ಷದ ಬಾಲಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೆನ್ ವಿಚಾರಕ್ಕೆ ನಡೆದ ಜಗಳದಲ್ಲಿ ಐದನೇ ತರಗತಿಯ ವಿದ್ಯಾರ್ಥಿಯ ಕಣ್ಣು ಗುಡ್ಡೆಯನ್ನ ಒಂದನೇ ತರಗತಿ ವಿದ್ಯಾರ್ಥಿ ಕಿತ್ತಿದ್ದಾನೆ. ಪ್ರಕರಣದಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಕಂಡು ಬಂದ ಹಿನ್ನೆಲೆಯಲ್ಲಿ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಢವಳೇಶ್ವರ ಗ್ರಾಮದಲ್ಲಿರುವ ಮೊರಬದ ವಸತಿ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಸೆಪ್ಟೆಂಬರ್ 3 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  

ಒಂದನೇ ತರಗತಿ ವಿದ್ಯಾರ್ಥಿ ಭಿಮಪ್ಪ ಲೋಕುರೆಗೆ ಐದನೇ ತರಗತಿ ವಿದ್ಯಾರ್ಥಿ ಸಮರ್ಥ್ ಪೆನ್ ನೀಡಿದ್ದ. ಅದನ್ನು ವಾಪ್ ಕೇಳಿದ್ದಕ್ಕೆ ವಿದ್ಯಾರ್ಥಿ ಭಿಮಪ್ಪ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗಿದೆ. ಗಾಯಗೊಂಡ ಬಾಲಕನನ್ನ ಬೆಳಗಾವಿ ಜಿಲ್ಲೆ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನ ಬಲಗಣ್ಣಿಗೆ ಗಂಭೀರ ಗಾಯವಾಗಿದೆ.

ಘಟನೆ ಬಗ್ಗೆ ಮುಖ್ಯ ಶಿಕ್ಷಕಿ ಜಯಶ್ರೀ ನಡುವಿನಕೇರಿ, ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿಗೆ ಗಮನಕ್ಕೆ ತಂದಿದ್ದಾರೆ. ಘಟನೆಯನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !