ಹೊಸದಿಗಂತ ಡಿಜಿಟಲ್ ಡೆಸ್ಕ್:
ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರದ ಬಿಡುಗಡೆ ದಿನಾಂಕಕ್ಕೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ಬಾರಿ ಮುಂದೂಡಿಕೆಯಾಗಿದ್ದ ಈ ಸಿನಿಮಾ ಇದೀಗ ನಿಗದಿತ ದಿನಾಂಕದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗುವ ಸಾಧ್ಯತೆ ಇದೆ.
ಜುಲೈ 24ಕ್ಕೆ ಗ್ರ್ಯಾಂಡ್ ರಿಲೀಸ್
ಇತ್ತೀಚಿನ ಮಾಹಿತಿ ಪ್ರಕಾರ, ‘ಜನ ನಾಯಕನ್’ ಸಿನಿಮಾ 2026ರ ಜುಲೈ 24ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ವಿದೇಶಿ ವಿತರಕರಿಗೂ ಚಿತ್ರತಂಡ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:
ಸ್ಟಾರ್ ಕಲಾವಿದರ ಭರ್ಜರಿ ಬಳಗ
ಚಿತ್ರಕ್ಕೆ ನಿರ್ದೇಶಕ ಎಚ್. ವಿನೋದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಜಯ್ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಬಾಬಿ ಡಿಯೋಲ್, ಪ್ರಕಾಶ್ ರಾಜ್, ಪ್ರಿಯಾಮಣಿ, ಗೌತಮ್ ವಾಸುದೇವ್ ಮೆನನ್, ಮಮಿತಾ ಬೈಜು ಹಾಗೂ ನರೇನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಚಿತ್ರಕ್ಕಿದೆ.
‘ಟಾಕ್ಸಿಕ್’ಗೂ ದಾರಿ ಮಾಡಿಕೊಟ್ಟ ರಿಲೀಸ್ ಪ್ಲ್ಯಾನ್
ಈ ಚಿತ್ರವನ್ನು ನಿರ್ಮಿಸಿರುವ ಕೆವಿಎನ್ ಪ್ರೊಡಕ್ಷನ್ಸ್ನ ಮತ್ತೊಂದು ದೊಡ್ಡ ಸಿನಿಮಾ ‘ಟಾಕ್ಸಿಕ್’ ಆಗಸ್ಟ್ 26ರಂದು ಬಿಡುಗಡೆಯಾಗಲಿರುವ ಹಿನ್ನೆಲೆ, ಎರಡೂ ಚಿತ್ರಗಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ‘ಜನ ನಾಯಕನ್’ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.



