July 9, 2026
Thursday, July 9, 2026
spot_img

ವಸತಿ ಶಾಲೆಯ ವಿದ್ಯಾರ್ಥಿಯ ಅನುಮಾನಾಸ್ಪದ ಸಾ*ವು: ದೈಹಿಕ ಶಿಕ್ಷಕ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೃತ ಬಾಲಕ ಗುರುಕಿರಣ್‌ನ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದೈಹಿಕ ಶಿಕ್ಷಣ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಪೋಷಕರ ದೂರಿನ ಮೇರೆಗೆ ಕ್ರಮ

ಬಾಲಕನ ಸಾವಿಗೆ ಶಾಲಾ ಆಡಳಿತ ಮತ್ತು ದೈಹಿಕ ಶಿಕ್ಷಕರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿರುವ ಪೋಷಕರು ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ:

ಶಾಲೆಯಲ್ಲಿ ಉದ್ವಿಗ್ನ ವಾತಾವರಣ

ಘಟನೆ ಬಳಿಕ ಶಾಲಾ ಆವರಣದಲ್ಲಿ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಬಾಲಕನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಬಳಿಕ ಪೊಲೀಸರ ಭರವಸೆಯ ನಂತರ ದೂರು ಸಲ್ಲಿಸಿದರು.

ಪ್ರಾಥಮಿಕ ಪರಿಶೀಲನೆಯಲ್ಲಿ ಗಂಭೀರ ಅನಾರೋಗ್ಯದ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಿಳಿದುಬಂದಿದ್ದು, ಸಾವಿನ ನಿಖರ ಕಾರಣ ಪತ್ತೆಗಾಗಿ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !