Wednesday, September 10, 2025

ತೇಜಸ್ವಿ ಯಾದವ್‌ ಪತ್ನಿ ಬಗ್ಗೆ ಕೀಳಾಗಿ ಕಮೆಂಟ್‌ ಮಾಡಿದ ಮಾಜಿ ಶಾಸಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕಿರಿ ಸೊಸೆ, ತೇಜಸ್ವಿ ಯಾದವ್ ಪತ್ನಿಯನ್ನು ಜೆರ್ಸಿ ಹಸು ಎಂದು ಮಾಜಿ ಶಾಸಕ ರಾಜವಲ್ಲಭ್ ಯಾದವ್ ಹೇಳಿಕೆ ನೀಡಿದ್ದಾರೆ. ಈ ಕೀಳು ಕಮೆಂಟ್‌ನಿಂದ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ.

ಮಾಜಿ ಶಾಸಕ ರಾಜ್‌ ಬಲ್ಲಭ್‌, ತೇಜಸ್ವಿ ಪತ್ನಿ ವಿರುದ್ಧ ಕೀಳಾಗಿ ಮಾತನಾಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ತೇಜಸ್ವಿ ಯಾದವ್ ಜಾತಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಯಾದವ್ ಹುಡುಗಿಯನ್ನು ಮದುವೆಯಾಗಲಿಲ್ಲ. ಮದುವೆಯಾಗಿದ್ದರೆ, ಯಾದವ್ ಸಮುದಾಯದ ಮಗಳಿಗೆ ಲಾಭವಾಗುತ್ತಿತ್ತು. ಅವರು ಹರಿಯಾಣ-ಪಂಜಾಬ್‌ನಿಂದ ಜೆರ್ಸಿ ಹಸುವನ್ನು ಕರೆತಂದಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜವಲ್ಲಭ್ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್​ಜೆಡಿ ನಾಯಕ ಕೌಶಲ್ ಯಾದವ್, ತೇಜಸ್ವಿ ಯಾದವ್ ಅವರ ಪತ್ನಿಯ ಬಗ್ಗೆ ವೈಯಕ್ತಿಕ ಟೀಕೆಗಳನ್ನು ಮಾಡುವ ಮೂಲಕ ರಾಜ್ವಲ್ಲಭ್ ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಇಂತಹ ಹೇಳಿಕೆಯಿಂದ ಸಮಾಜದ ಪ್ರತಿಯೊಂದು ವರ್ಗಕ್ಕೂ ನೋವಾಗಿದೆ. ಇದು ತೇಜಸ್ವಿ ಅವರ ಪತ್ನಿಗೆ ಮಾತ್ರವಲ್ಲದೆ ಇಡೀ ಮಹಿಳಾ ಸಮಾಜಕ್ಕೆ ಮಾಡಿದ ಅವಮಾನ. ಈ ವ್ಯಕ್ತಿಯನ್ನು ಮತ್ತೆ ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ