July 9, 2026
Thursday, July 9, 2026
spot_img

ಶೂ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ: ದಟ್ಟ ಹೊಗೆಯ ನಡುವೆ ಸಿಲುಕಿ 28 ಜನರ ದಾರುಣ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪೂರ್ವ ಚೀನಾದ ಪ್ರಮುಖ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 28 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಕಾರ್ಖಾನೆಯ ಒಳಗಡೆ ನೂರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಸ್ಥಳಕ್ಕೆ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ತೀವ್ರಗೊಳಿಸಿವೆ. ಗಾಯಗೊಂಡಿರುವ ಹತ್ತಾರು ಜನರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ..

ರಾಸಾಯನಿಕಗಳಿಂದ ಹೆಚ್ಚಿದ ಬೆಂಕಿಯ ಜ್ವಾಲೆ

ಶೂ ತಯಾರಿಕೆಗೆ ಬಳಸುವ ರಬ್ಬರ್, ಗ್ಲೂ ಮತ್ತು ಇತರ ರಾಸಾಯನಿಕ ಪದಾರ್ಥಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇಡೀ ಕಾರ್ಖಾನೆಯ ತುಂಬಾ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು. ಇದು ಬೆಂಕಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಖಾನೆಯಿಂದ ಹೊರಬರಲು ಕೇವಲ ಒಂದೇ ಒಂದು ತುರ್ತು ನಿರ್ಗಮನ ದ್ವಾರ ಇದ್ದಿದ್ದರಿಂದ, ದಟ್ಟ ಹೊಗೆಯ ನಡುವೆ ಸಿಲುಕಿದ ಕಾರ್ಮಿಕರು ಉಸಿರುಗಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:

ಮುನ್ನೆಚ್ಚರಿಕಾ ನಿಯಮಗಳ ಉಲ್ಲಂಘನೆ?

ಪ್ರಾಥಮಿಕ ತನಿಖೆಯ ಪ್ರಕಾರ, ಕಾರ್ಖಾನೆಯಲ್ಲಿ ಅಗ್ನಿ ನಿರೋಧಕ ವ್ಯವಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ ಮತ್ತು ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಹಾಗೂ ಮ್ಯಾನೇಜರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೀನಾ ಸರ್ಕಾರವು ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !