July 10, 2026
Friday, July 10, 2026
spot_img

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿಯೂ ಸಿಸಿಟಿವಿ ಕಡ್ಡಾಯ: ಸಿಎಂ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ರಾಮಮಂದಿರದಲ್ಲಿ ಆದ ಘಟನೆಯಿಂದ ನೋವಾಗಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಈ ಸ್ಥಿತಿ ನಮ್ಮ ಕರ್ನಾಟಕಕ್ಕೆ ಬರುವುದು ಬೇಡ. ನಮ್ಮ ಮುಜರಾಯಿ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ. ಪ್ರತಿ ದೇವಸ್ಥಾನದಲ್ಲಿಯೂ ಸಿಸಿಟಿವಿ ಕಂಟ್ರೋಲ್‌ ರೂಮ್‌ ಸ್ಥಾಪಿಸುತ್ತೇವೆ. ಭಕ್ತರು ಹುಂಡಿಗೆ ಹಾಕುವ ಪ್ರತಿ ನೋಟು, ಚಿಲ್ಲರೆ ಸಿಸಿಟಿವಿಯಲ್ಲಿ ಚಿತ್ರಣ ಆಗಬೇಕು ಎಂದಿದ್ದಾರೆ.

ರಾಜ್ಯದ ಎಲ್ಲ ಪ್ರಮುಖ ಮುಜರಾಯಿ ದೇವಾಲಯಗಳಲ್ಲಿ ಗರ್ಭಗುಡಿ ಸಮೀಪ, ಕಾಣಿಕೆ ಪೆಟ್ಟಿಗೆಗಳ ಬಳಿ, ಕಾಣಿಕೆ ತೆರೆಯುವ ಸ್ಥಳ, ಹಣ ಎಣಿಕೆ ಕೊಠಡಿ ಹಾಗೂ ಹಣ ಸಂಗ್ರಹಿಸುವ ಎಲ್ಲ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚಿಸಲಾಗಿದೆ. ಈ ಕ್ಯಾಮೆರಾಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಸಂಬಂಧಪಟ್ಟ ಪೊಲೀಸ್ ಠಾಣೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ವ್ಯವಸ್ಥೆಗೆ ನೇರವಾಗಿ ಸಂಪರ್ಕಿಸಲಾಗುವುದು ಎಂದಿದ್ದಾರೆ.

ಇತ್ತೀಚೆಗೆ ದೇವಾಲಯದಲ್ಲಿ ನಡೆದ ದೇಣಿಗೆ ಕಳವು ಪ್ರಕರಣ ಸರ್ಕಾರಕ್ಕೆ ಹಾಗೂ ಭಕ್ತರಿಗೆ ಮಾನಸಿಕ ಆಘಾತ ಉಂಟುಮಾಡಿದೆ. ಭಕ್ತರು ಭಕ್ತಿಭಾವದಿಂದ ಕಾಣಿಕೆ, ಹಣ ಹಾಗೂ ಬೆಳ್ಳಿ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಸಮರ್ಪಿಸುತ್ತಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !