September 2, 2026
Wednesday, September 2, 2026
spot_img

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಬಿಗ್‌ ರಿಲೀಫ್‌: ವೆಂಡಿಂಗ್‌ ಪ್ಯಾನಲ್‌ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈ ಬಗ್ಗೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು, ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ (ಐಡಿ ಕಾರ್ಡ್) ವಿತರಿಸುವ ಉದ್ದೇಶದಿಂದ ತಾತ್ಕಾಲಿಕ ಟೌನ್ ವೆಂಡಿಂಗ್ ಸಮಿತಿ ರಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ಪೂರ್ಣ ಪ್ರಮಾಣದ ಟೌನ್ ವೆಂಡಿಂಗ್ ಸಮಿತಿಯನ್ನೂ ರಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಕಾರ್ಯಾಚರಣೆ ಬೀದಿ ವ್ಯಾಪಾರಿಗಳ ವಿರುದ್ಧ ಅಲ್ಲ. ಪಾದಚಾರಿಗಳಿಗೆ ಸುರಕ್ಷಿತವಾಗಿ ಸಂಚರಿಸಲು ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವುದೇ ಇದರ ಉದ್ದೇಶ ಎಂದು ಸ್ಪಷ್ಟಪಡಿಸಿದರು. ಕಳೆದ ಮೂರು ವರ್ಷಗಳಲ್ಲಿ ಪಾದಚಾರಿ ಮಾರ್ಗಗಳ ಅತಿಕ್ರಮಣದಿಂದಾಗಿ 931 ಪಾದಚಾರಿಗಳು ಮೃತಪಟ್ಟಿದ್ದು, 3,800 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 3,500ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವಿಗೆ ಆದೇಶ ನೀಡಿದೆ. ಸುರಕ್ಷಿತ ಪಾದಚಾರಿ ಮಾರ್ಗದಲ್ಲಿ ಸಂಚರಿಸುವುದು ಸಂವಿಧಾನಬದ್ಧ ಹಕ್ಕು. ಈ ಕಾರ್ಯಾಚರಣೆ ಕುರಿತು ಹಲವರು ಟೀಕೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ, ನಿಂದಿಸುತ್ತಿದ್ದಾರೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !