July 10, 2026
Friday, July 10, 2026
spot_img

ಮಾನಸಿಕ ಅಸ್ವಸ್ಥಳಾಗಿದ್ದ ಬಾಲಕಿಯ ಮೇಲೆ ಪಕ್ಕದಮನೆಯ ವ್ಯಕ್ತಿಯಿಂದ ನಿರಂತರ ಅತ್ಯಾಚಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗದಗದ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ 19 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಮಾನಸಿಕ ಅಸ್ವಸ್ಥೆಯ ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಪಕ್ಕದಮನೆಯ ದುರ್ಗಪ್ಪ ಮದರ್‌ ಎಂಬಾತ ಮನೆಗೆ ಬಂದು ಆಕೆಗೆ ಚಾಕೋಲೇಟ್‌ ನೀಡುತ್ತೇನೆ ಎಂದು ಹೇಳಿ ಅತ್ಯಾಚಾರ ಎಸಗಿದ್ದಾನೆ. ಆಕೆ ಗರ್ಭಿಣಿಯಾದ ನಂತರ ಈ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದು, ತಾಯಿ ಪಕ್ಕದ ಮನೆಯ ದುರ್ಗಪ್ಪ ಮದರ್‌ ವಿರುದ್ಧ ದೂರು ನೀಡಿದ್ದಾರೆ. ಬಾಲಕಿ ಗರ್ಭಿಣಿಯಾಗಿದ್ದಾಳೆಂದು ತಿಳಿದಾಗ ಗರ್ಭಪಾತ ಮಾಡಿಸಲು ದುರ್ಗಪ್ಪ ಮದರ್ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯರು ಗರ್ಭಪಾತ ಮಾಡಲು ನಿರಾಕರಿಸಿದಾಗ, ದುರ್ಗಪ್ಪ ಈ ವಿಷಯವನ್ನು ಬಹಿರಂಗಪಡಿಸದಂತೆ ಆಕೆಯ ತಾಯಿಗೆ ಬೆದರಿಕೆ ಹಾಕಿದರು ಮತ್ತು ತನ್ನ ಅಪರಾಧವನ್ನು ಮರೆಮಾಡಲು 50,000 ರೂ.ಗಳನ್ನು ನೀಡಿದ್ದ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !