ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದ ಬಳಿಕ, ನೈಋತ್ಯ ಮಾನ್ಸೂನ್ಗೆ ತಾತ್ಕಾಲಿಕ ವಿರಾಮ ಸಿಗುವ ಲಕ್ಷಣಗಳು ಕಾಣಿಸಿಕೊಂಡಿವೆ.
ಮುಂದಿನ ಐದರಿಂದ ಏಳು ದಿನಗಳವರೆಗೆ ಉತ್ತರ, ಪಶ್ಚಿಮ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಎಲ್ಲೆಲ್ಲಿ ಮಳೆ ಕಡಿಮೆ?
ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಇಳಿಕೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿಸಿ ಮತ್ತು ತೇವಾಂಶ ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:
ಈ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಕೆ
ಉತ್ತರಾಖಂಡ, ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ರೈತರಿಗೆ ಆತಂಕ
ಮಳೆ ವಿರಾಮದಿಂದ ಹೊಸದಾಗಿ ಬಿತ್ತನೆ ಮಾಡಿದ ಖಾರಿಫ್ ಬೆಳೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ ತಿಂಗಳ ಕೊನೆಯ ಭಾಗದಲ್ಲಿ ಮತ್ತೆ ಮಾನ್ಸೂನ್ ಚುರುಕುಗೊಳ್ಳುವ ಸಾಧ್ಯತೆ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.



