August 26, 2026
Wednesday, August 26, 2026
spot_img

ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾ*ವು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ನಗರದ ಹೊರವಲಯದಲ್ಲಿರುವ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜುಗುಜ್ಜಾಗಿದ್ದು, ಘಟನಾ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಡಿಸಿಪಿ ಶಾಲು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:

ಘಟನಾ ಸ್ಥಳಕ್ಕೆ ಟ್ರಾಫಿಕ್-01 ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !