ಹೊಸದಿಗಂತ ವರದಿ ಶಿವಮೊಗ್ಗ:
ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಒಂದು ಮಂಗಳವಾರ ಜಿಲ್ಲೆಯಲ್ಲಿ ವೈರಲ್ ಆಗಿದೆ.
ಭದ್ರಾವತಿಯಲ್ಲಿ ಸೋಮವಾರ ರಾತ್ರಿ ಈದ್ ಮಿಲಾದ್ ಮೆರವಣಿಗೆ ನಡೆದಿತ್ತು. ಅಲ್ಲಿನ ತರೀಕೆರೆ ರಸ್ತೆಯ ಗಾಂಧಿ ವೃತ್ತದ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಮೆರವಣಿಗೆಯಲ್ಲಿ ಇದ್ದವರು ಈ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ಸಂಬಂಧ ಭದ್ರಾವತಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗುವುದು. ಘಟನೆ ಸಂಬಂಧ ತನಿಖೆ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈದ್‌ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ!
