August 27, 2026
Thursday, August 27, 2026
spot_img

ಯುಎಸ್-ಇರಾನ್ ಸಂಧಾನಕ್ಕೆ ಪಾಕ್ ಪ್ರಧಾನಿ ಮುಂದು: ಪ್ರಾದೇಶಿಕ ಶಾಂತಿಗಾಗಿ ಕಸರತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಮತ್ತು ಇರಾನ್ ನಡುವೆ ಸ್ಥಗಿತಗೊಂಡಿರುವ ಶಾಂತಿ ಮಾತುಕತೆಯನ್ನು ಪುನರಾರಂಭಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಹೊಸ ರಾಜತಾಂತ್ರಿಕ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶುಕ್ರವಾರ ರಾತ್ರಿ ಇರಾನ್ ಮತ್ತು ಖತಾರ್ ದೇಶಗಳ ಪ್ರಮುಖ ನಾಯಕರೊಂದಿಗೆ ಅವರು ಪ್ರತ್ಯೇಕವಾಗಿ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಇತ್ತೀಚೆಗೆ ಉಭಯ ದೇಶಗಳ ನಡುವೆ ನಡೆದ ಸರಣಿ ದಾಳಿಗಳು ಮತ್ತು ಪರಸ್ಪರ ಆರೋಪ-ಪ್ರತ್ಯಾರೋಪಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಶಾಂತಿಗೆ ಕರೆ

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದ ಪ್ರಧಾನಿ ಷರೀಫ್, ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಉದ್ವಿಗ್ನತೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು. ಪ್ರಾದೇಶಿಕವಾಗಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವುದು ಪ್ರಸ್ತುತ ಜಾಗತಿಕ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಸಂಯಮಕ್ಕೆ ಮನವಿ

ಕಳೆದ ಕೆಲವು ತಿಂಗಳುಗಳಿಂದ ಕಷ್ಟಪಟ್ಟು ಸಾಧಿಸಲಾದ ಶಾಂತಿ ಪ್ರಕ್ರಿಯೆಗೆ ಯಾವುದೇ ಧಕ್ಕೆ ಬರದಂತೆ ನೋಡಿಕೊಳ್ಳಬೇಕಿದೆ. ಹೀಗಾಗಿ ಸಂಬಂಧಪಟ್ಟ ಎಲ್ಲಾ ದೇಶಗಳು ಅತ್ಯಂತ ಸಂಯಮದಿಂದ ವರ್ತಿಸಬೇಕು ಮತ್ತು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುವ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು ಎಂದು ಪಾಕಿಸ್ತಾನದ ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !