July 11, 2026
Saturday, July 11, 2026
spot_img

ಎಸ್‌ಐಆರ್‌ ಡ್ಯೂಟಿ ಮುಗಿಸಿ ಮನೆಗೆ ಬಂದು ಕೂತಿದ್ದ ಬಿಎಲ್‌ಒಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗ್ಗೆಯಿಂದ ಎಸ್‌ಐಆರ್‌ ಡ್ಯೂಟಿ ಮಾಡಿ ಸುಸ್ತಾಗಿ ಮನೆಗೆ ಬಂದಿದ್ದ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

ಡಿ.ಆರ್‌. ರಾಜಪ್ಪ ( 57 ) ಮೃತರು.

ಡಿ. ಆರ್‌. ರಾಜಪ್ಪ ಚಿರಡೋಣಿ ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಆಗಿದ್ದರು. ಜು.10 ರಂದು ಎಸ್‌ಐಆರ್‌ ಕೆಲಸದ ಮೇಲೆ ಮನೆ ಮನೆಗೆ ಭೇಟಿ ನೀಡಿ, ವಾಪಸ್‌ ಆಗಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !