July 12, 2026
Sunday, July 12, 2026
spot_img

ಅಕ್ಟೋಬರ್‌ನಲ್ಲಿ ಪಂಚಾಯತ್‌ ಚುನಾವಣೆ : ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಬಹುತೇಕ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕಾಗಿ ಬಂದಿದ್ದು, ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲಾತಿ ನಿರ್ಧರಿಸಿ ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಆಯೋಗವು 45 ದಿನಗಳಲ್ಲಿ ಚುನಾವಣೆ ನಡೆಸುತ್ತದೆ ಎಂದರು.

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಿಬ್ಬಂದಿ ಆ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ. ಸ್ವಲ್ಪ ಕಾಲಾವಕಾಶ ಕೇಳಲಾಗಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !