ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್.ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ ಎಂದಿದ್ದಾರೆ.
ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿʼ ಎಂದು ಸಂತಾಪ ಸೂಚಿಸಿದ್ದಾರೆ.



