July 12, 2026
Sunday, July 12, 2026
spot_img

ಇ-ಬಸ್ ಜಾರಿಯಲ್ಲಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಚಿತ್ರಣವನ್ನೇ ಬದಲಿಸಬಹುದಾದ 4,500 ಎಲೆಕ್ಟ್ರಿಕ್ ಬಸ್‌ಗಳ ಯೋಜನೆಗೆ ರಾಜ್ಯ ಸರ್ಕಾರವೇ ಬ್ರೇಕ್ ಹಾಕಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಕೇಂದ್ರ ಸರ್ಕಾರವು ‘ಪಿಎಂ ಇ-ಡ್ರೈವ್’ ಯೋಜನೆಯಡಿ ಈ ಬಸ್‌ಗಳನ್ನು ಮಂಜೂರು ಮಾಡಿದ್ದರೂ, ರಾಜ್ಯ ಸಚಿವ ಸಂಪುಟ ಇದಕ್ಕೆ ಇನ್ನೂ ಅನುಮೋದನೆ ನೀಡದಿರುವುದು ಜೆಡಿಎಸ್ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಪುಟ ಅನುಮೋದನೆಗೆ ವಿಳಂಬ:

 ಕೇಂದ್ರ ಸರ್ಕಾರ ಬಸ್‌ಗಳನ್ನು ನೀಡಲು ಸಿದ್ಧವಿದ್ದರೂ, ಕಾಂಗ್ರೆಸ್ ಸರ್ಕಾರವು ತನ್ನ ಕ್ಯಾಬಿನೆಟ್ ಸಭೆಯಲ್ಲಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡದೆ ಕಾಲಹರಣ ಮಾಡುತ್ತಿದೆ ಎಂದು ಜೆಡಿಎಸ್ ದೂರಿದೆ. ಈ ಇ-ಬಸ್‌ಗಳನ್ನು ರಸ್ತೆಗಿಳಿಸಿದರೆ ಬಿಎಂಟಿಸಿಗೆ ವಾರ್ಷಿಕವಾಗಿ ಸುಮಾರು 1,000 ಕೋಟಿ ರೂ. ನಷ್ಟ ಉಂಟಾಗಬಹುದು ಎಂಬ ಆರ್ಥಿಕ ಭೀತಿಯಿಂದಾಗಿ ಸರ್ಕಾರ ಈ ನಿರ್ಧಾರದಿಂದ ಹಿಂದೇಟು ಹಾಕುತ್ತಿದೆ ಎಂದು ಜೆಡಿಎಸ್ ದೂರಿದೆ.

ಎಕ್ಸ್ ನಲ್ಲಿ ವಾಗ್ದಾಳಿ:

ಸರ್ಕಾರದ ಈ ಆಡಳಿತ ವೈಫಲ್ಯ ಮತ್ತು ಪರಿಸರ ಸ್ನೇಹಿ ಯೋಜನೆಗಳ ಕಡೆಗಣನೆಯ ವಿರುದ್ಧ ಜೆಡಿಎಸ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸರಣಿ ಪೋಸ್ಟ್‌ಗಳ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ:

ಸಾರ್ವಜನಿಕರ ಹಿತಾಸಕ್ತಿ ಬಲಿ

ಕೇಂದ್ರದ ಉಚಿತ ಸಹಾಯ ಧನ ಮತ್ತು ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಮಾಲಿನ್ಯ ತಡೆಗಟ್ಟಲು ಇದು ಅತ್ಯುತ್ತಮ ಅವಕಾಶವಾಗಿತ್ತು. ಆದರೆ ಸರ್ಕಾರದ ಆರ್ಥಿಕ ಅಸಮರ್ಥತೆ ಮತ್ತು ಗ್ಯಾರಂಟಿ ಯೋಜನೆಗಳ ಹೊರೆಯಿಂದಾಗಿ ಇಂತಹ ಬೃಹತ್ ಸಾರಿಗೆ ಅಭಿವೃದ್ಧಿ ಯೋಜನೆಗಳು ನನೆಗುದಿಗೆ ಬಿದ್ದಿವೆ ಎಂದು ಜೆಡಿಎಸ್ ನಾಯಕರು ಟೀಕಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !