ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸೋಮವಾರ ತಡೆ ನೀಡಿದೆ. ಹೈಕೋರ್ಟ್ ತೀರ್ಪಿನ ಕೊನೆಯ ಪ್ಯಾರಾಗ್ರಾಫ್ನಲ್ಲಿರುವ ನಿರ್ದೇಶನಗಳು ಕಾನೂನಾತ್ಮಕವಾಗಿ “ತಿದ್ದುಪಡಿ”ಗೆ ಅರ್ಹವಾಗಿವೆ ಎಂದು ಸುಪ್ರೀಂ ಪೀಠ ಅಭಿಪ್ರಾಯಪಟ್ಟಿದೆ.
ಸರ್ಕಾರದ ವಾದ ಮತ್ತು ಗೊಂದಲಗಳು
ಈ ಪ್ರಕರಣದಲ್ಲಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಬಲವಾದ ವಾದ ಮಂಡಿಸಿತ್ತು. ನಿಯೋಜಿತ ಕಸಾಯಿಖಾನೆಗಳಲ್ಲಿ ಮಾತ್ರ ಪ್ರಾಣಿ ಹಿಂಸೆ ಅಥವಾ ಹತ್ಯೆ ನಡೆಸಬಹುದು ಎಂದು ಹೈಕೋರ್ಟ್ ಒಂದು ಕಡೆ ಹೇಳಿದೆ. ಆದರೆ ಮತ್ತೊಂದೆಡೆ, ಬಕ್ರೀದ್ ಸೇರಿದಂತೆ ಯಾವುದೇ ದಿನಗಳಲ್ಲಿ ಹಸು ಅಥವಾ ಕರುಗಳನ್ನು ಕೊಲ್ಲಬಾರದು ಎಂದು ಆದೇಶಿಸಿದೆ. ಹೈಕೋರ್ಟ್ನ ಈ ಎರಡು ನಿರ್ದೇಶನಗಳು ಪರಸ್ಪರ ವಿರೋಧಾಭಾಸ ಹಾಗೂ ಗೊಂದಲಗಳಿಂದ ಕೂಡಿವೆ ಎಂದು ರಾಜ್ಯ ಸರ್ಕಾರ ಕೋರ್ಟ್ ಗಮನಕ್ಕೆ ತಂದಿತ್ತು. ಈ ವಾದವನ್ನು ಆಲಿಸಿದ ಉನ್ನತ ನ್ಯಾಯಾಲಯವು ಸದ್ಯಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.



