ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಶರಣ್ಯ, ಗಿರೀಶ್ ಆತ್ಮಹತ್ಯೆಗೆ ಶರಣಾದ ನವದಂಪತಿ. ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶರಣ್ಯ ಹಾಗೂ ಗಿರೀಶ್ ಅನ್ಯೂನ್ಯವಾಗಿಯೇ ಇದ್ದರು. ಇದ್ದಕ್ಕಿದ್ದಂತೆಯೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನು ನೋಡಿದ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ



