September 20, 2026
Sunday, September 20, 2026
spot_img

ಗಿನ್ನಿಸ್‌ ದಾಖಲೆ ಮಾಡ್ತೀನಂತ ಆರು ವರ್ಷದ ಮಗುವಿಗೆ ಕಾರ್‌ ಕೊಟ್ಟ ತಾತನ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಿನ್ನಿಸ್‌ ದಾಖಲೆ ನಿರ್ಮಿಸಲು ಆರು ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಅವಕಾಶ ಕೊಟ್ಟಿದ್ದ ಸಬ್‌ಇನ್ಸ್‌ಪೆಕ್ಟರ್‌ ವಿರುದ್ಧ ಕೇಸ್‌ ದಾಖಲಾಗಿದೆ.

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಘಟನೆ ಇದಾಗಿದೆ. ವಿಶ್ವದ ಅತ್ಯಂತ ಕಿರಿಯ ಚಾಲಕಿ ಎಂಬ ಗಿನ್ನಿಸ್‌ ದಾಖಲೆಯನ್ನು ನಿರ್ಮಿಸುವ ಉದ್ದೇಶದಿಂದ ಮೊಮ್ಮಗಳಿಗೆ ಕಾರು ಚಲಾಯಿಸಲು ನೀಡಲಾಗಿದೆ.

ಸಬ್ ಇನ್ಸ್‌ಪೆಕ್ಟರ್‌ ಪೂಜಾರಿ ತಿರುಪತಿ ಅವರು ಜನಸಂದಣಿಯುಳ್ಳ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟಿದ್ದರು ಎಂದು ತಿಳಿದುಬಂದಿದೆ.ತಮ್ಮ ಮಗುವನ್ನು ಕಾರಿನ ಸ್ಟೀರಿಂಗ್ ಮುಂದೆ ಕೂರಿಸಿಕೊಂಡು ವಾಹನವನ್ನು ನಿಧಾನವಾಗಿ ಚಲಾಯಿಸುತ್ತಿದ್ದರು. ಇದರಿಂದಾಗಿ ಅಲ್ಲಿ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಲ್ಲಿದ್ದ ವ್ಯಕ್ತಿಯೊಬ್ಬರು ಮಗುವನ್ನು ಹೀಗೆ ಕೂರಿಸಿಕೊಂಡು ಓಡಿಸುವುದು ಅಪಾಯಕಾರಿಯಲ್ಲವೇ? ಎಂದು ಅಧಿಕಾರಿಯನ್ನು ಪ್ರಶ್ನಿಸಿದರು. ಅದಕ್ಕೆ ಸಬ್ ಇನ್ಸ್‌ಪೆಕ್ಟರ್‌ ಕೋಪಗೊಂಡು, ಇದು ನನ್ನ ಇಷ್ಟ, ನನ್ನನ್ನು ಕೇಳಲು ನೀವ್ಯಾರು? ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆದ ನಂತರ ಕಾನೂನು ಎಲ್ಲರಿಗೂ ಒಂದೇ, ಪೊಲೀಸರಿಗೂ ಇದು ಅನ್ವಯಿಸುತ್ತದೆ. ತಕ್ಷಣ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಆ ಮಗುವಿನ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಆ ರಸ್ತೆಯಲ್ಲಿ ಓಡಾಡುತ್ತಿದ್ದ ಇತರ ವಾಹನ ಸವಾರರು ಮತ್ತು ಪಾದಚಾರಿಗಳ ಜೀವಕ್ಕೂ ಅಪಾಯವಿದೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !