July 13, 2026
Monday, July 13, 2026
spot_img

ಏನ್ ವಿಚಿತ್ರ ಕಣ್ರೀ..! ಕೋಪದಲ್ಲಿ ಮೊಬೈಲ್ ಎಸೆದ ಪತ್ನಿ, ತಲೆಗೆ ಬಡಿದು ಗಂಡ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಟುಂಬದೊಳಗಿನ ಕ್ಷಣಿಕ ಕೋಪ ಎಂತಹ ದುರಂತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ನಡೆದ ಘಟನೆ ಉದಾಹರಣೆಯಾಗಿದೆ. ಪತಿ-ಪತ್ನಿಯ ನಡುವೆ ನಡೆದ ಜಗಳದ ವೇಳೆ ಎಸೆದ ಮೊಬೈಲ್ ಫೋನ್ ತಲೆಗೆ ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜಗಳದ ವೇಳೆ ನಡೆದದ್ದು ಏನು?

ಮನೆಯಲ್ಲೇ ನಡೆದ ವಾಗ್ವಾದ ತೀವ್ರಗೊಂಡಾಗ, ಆಕ್ರೋಶಗೊಂಡ ಪತ್ನಿ ಕೈಯಲ್ಲಿದ್ದ ಮೊಬೈಲ್ ಫೋನ್ ಅನ್ನು ಪತಿಯತ್ತ ಎಸೆದಿದ್ದಾಳೆ ಎನ್ನಲಾಗಿದೆ. ಫೋನ್ ನೇರವಾಗಿ ತಲೆಗೆ ಬಡಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯ ಸುಧಾರಿಸಿದ ಕಾರಣ ಮನೆಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ:

ಮನೆಗೆ ಬಂದ ಬಳಿಕ ಆರೋಗ್ಯ ಹದಗೆಟ್ಟಿತು

ಆಸ್ಪತ್ರೆಯಿಂದ ಮನೆಗೆ ಮರಳಿದ ಕೆಲವೇ ಸಮಯದಲ್ಲಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದೆ. ಕುಟುಂಬದವರು ಮತ್ತೆ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರ ಪ್ರಯತ್ನ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಪೊಲೀಸರ ತನಿಖೆ ಮುಂದುವರಿಕೆ

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದ್ದು, ಅದರ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !