ಹೊಸದಿಗಂತ ಡಿಜಿಟಲ್ ಡೆಸ್ಕ್:
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ 2 ದಿನಗಳ ಕಾಲ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಇದೀಗ ಪುತ್ರನ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸದ್ಯ ನ್ಯಾಯಾಂಗ ಬಂಧನಲ್ಲಿರುವ ವಿನಯ್ ಕುಲಕರ್ಣಿ ಅವರು ತಮ್ಮ ಮಗನ ಶಸ್ತ್ರಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ವಕೀಲರ ಮೂಲಕ ಅರ್ಜಿ ಸಲ್ಲಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದ್ದರು.