July 13, 2026
Monday, July 13, 2026
spot_img

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಬ್ರೇಕ್: ಈ ಜಿಲ್ಲೆಗಳಿಗೆ ಮಾತ್ರ ನಾಳೆ ಮಳೆ, ಉಳಿದೆಡೆ ರಣಬಿಸಿಲಿನ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕುಸಿದಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪವೂ ಹೆಚ್ಚಾಗಿದ್ದು, ಸೋಮವಾರ (ಜುಲೈ 14) ಆಯ್ದ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆಯ ನಿರೀಕ್ಷೆಯಿದೆ.

ಇದನ್ನೂ ಓದಿ:

ಬಿರುಗಾಳಿ ಎಚ್ಚರಿಕೆ, 12 ಜಿಲ್ಲೆಗಳಲ್ಲಿ ಮಳೆ ಇಲ್ಲ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮತ್ತೊಂದೆಡೆ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ರಾಮನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ಭಾನುವಾರ ಮಳೆಯೇ ದಾಖಲಾಗಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !