July 14, 2026
Tuesday, July 14, 2026
spot_img

ಇರಾನ್‌-ಅಮೆರಿಕಾ ಯುದ್ಧ ಬಿಡ್ರೀ, ನಿಮ್ಮೂರಲ್ಲೇ ಕೈದಿಗಳು ಪರಾರಿಯಾಗಿದ್ದಾರೆ ನೋಡಿ: ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಕಲಬುರಗಿ:

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆಯವರು ಇರಾನ್–ಅಮೆರಿಕಾ ಯುದ್ಧದ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ತಮ್ಮ ಗೃಹ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಮನ ಹರಿಸಬೇಕು ಎಂದು ವ್ಯಂಗ್ಯವಾಡಿದರು.

ರಾಜ್ಯದ ಗೃಹ ಸಚಿವರ ಕ್ಷೇತ್ರದಲ್ಲೇ ಭದ್ರತಾ ವೈಫಲ್ಯ ಸಂಭವಿಸಿ,ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವುದು ಗಂಭೀರ ವಿಷಯವಾಗಿದೆ. ಜೈಲು ಭದ್ರತಾ ವ್ಯವಸ್ಥೆಯಲ್ಲಿ ಆಗಿರುವ ಲೋಪಗಳ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಗೃಹ ಇಲಾಖೆಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿರುವ ಸಚಿವರು ಬೇರೆ ವಿಚಾರಗಳಲ್ಲಿ ನಿರತರಾಗಿರುವುದು ಸರಿಯಲ್ಲ ಎಂದು ಟೀಕಿಸಿದ ಅವರು,ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !