September 16, 2026
Wednesday, September 16, 2026
spot_img

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿವಿ ಸ್ಥಾಪನೆ : ಸಿಎಂ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿವಿ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಮಾತನಾಡಿ, ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುತ್ತೇವೆ ಎಂದಿದ್ದಾರೆ.

ಕರ್ನಾಟಕವನ್ನು `ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !