ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ತರ ಕ್ರಮ ಕೈಗೊಂಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯಲ್ಲಿ ಭಾರಿ ರದ್ದತಿ, ಮಾರ್ಪಾಡು ಮತ್ತು ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದ್ದು, ಹಲವು ತಹಶೀಲ್ದಾರ್‌ಗಳನ್ನು ವರ್ಗಾಯಿಸಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಪೋಸ್ಟಿಂಗ್:
ಕರ್ನಾಟಕ ಸರ್ಕಾರದ ಸಚಿವಾಲಯವು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಯಾವುದೇ ಹುದ್ದೆ ಸಿಗದೆ ಸ್ಥಳ ನಿರೀಕ್ಷೆಯಲ್ಲಿದ್ದ ಹಲವು ಅಧಿಕಾರಿಗಳಿಗೆ ತಕ್ಷಣವೇ ಕಾರ್ಯರೂಪಕ್ಕೆ ಬರುವಂತೆ ಹೊಸದಾಗಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ:
ನಿಯಮಾವಳಿ ಪಾಲಿಸಲು ಕಟ್ಟುನಿಟ್ಟಿನ ಸೂಚನೆ:
ಸರ್ಕಾರದ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ವರ್ಗಾವಣೆಗೊಂಡಿರುವ ಎಲ್ಲಾ ಅಧಿಕಾರಿಗಳು ವಿಳಂಬ ಮಾಡದೆ ನಿಯೋಜಿತ ಜಾಗದಲ್ಲಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಹಿಂದೆ ಹೊರಡಿಸಲಾಗಿದ್ದ ಕೆಲವು ವರ್ಗಾವಣೆ ಆದೇಶಗಳನ್ನು ರದ್ದುಪಡಿಸಲಾಗಿದೆ ಮತ್ತು ಇನ್ನು ಕೆಲವು ಆದೇಶಗಳಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿ ಈ ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.



