July 15, 2026
Wednesday, July 15, 2026
spot_img

ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಿದೆ.

ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಪಾವಗಡ ಭಾಗದಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಮೂಲಕ ನಿಗಾವನ್ನು ಹೆಚ್ಚಿಸಲಾಗಿದ್ದು, ಗಡಿಭಾಗದಲ್ಲಿ ಅಗತ್ಯ ತಪಾಸಣೆ ಮತ್ತು ಆರೋಗ್ಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ.

ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹಾಗೂ ಸಾವಿನ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿ ಗ್ರಾಮಗಳಲ್ಲಿ ವಿಶೇಷ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಸೇರಿದಂತೆ ಕೋವಿಡ್ ಲಕ್ಷಣಗಳು ಕಂಡುಬಂದರೆ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬೇಕು. ವಯೋವೃದ್ಧರು, ಗರ್ಭಿಣಿಯರು ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ:


ಸದ್ಯ ತುಮಕೂರು ಜಿಲ್ಲೆಯಲ್ಲಿ ಆತಂಕಪಡುವಂತಹ ಪರಿಸ್ಥಿತಿ ಇಲ್ಲ. ಆದರೆ ಗಡಿಭಾಗದ ಮೂಲಕ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಅಗತ್ಯವಿದ್ದರೆ ಮಾಸ್ಕ್ ಧರಿಸುವುದು, ಕೈಗಳನ್ನು ಸ್ವಚ್ಛವಾಗಿಡುವುದು ಹಾಗೂ ಆರೋಗ್ಯ ಸಮಸ್ಯೆ ಕಂಡುಬಂದರೆ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !