ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಲೂರು ಮಂಡ್ಲಿಯ ಪೇಪರ್ ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ಗೋದಾಮಿನಲ್ಲಿದ್ದ ಪೇಪರ್ ರೋಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ತಕ್ಷಣವೇ ಕಾರ್ಖಾನೆಯಿಂದ ಹೊರಬಂದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಯೋಚಿತ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ.
ಕಾರಣದ ಪತ್ತೆಗೆ ತನಿಖೆ
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



