July 16, 2026
Thursday, July 16, 2026
spot_img

ಬೀದಿನಾಯಿಗಳ ಕಾಟಕ್ಕೆ ಮತ್ತೊಂದು ಜೀವ ಬ*ಲಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟ ಕಂದಮ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದಿನಾಯಿಗಳ ದಾಳಿಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ದುರ್ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹಂಚಿಕಾಳ ಕ್ಯಾಂಪ್‌ನಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ 18 ತಿಂಗಳ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಮನೆ ಮುಂದೆ ಆಟವಾಡುತ್ತಿದ್ದಾಗ ದಾಳಿ

ನಿದ್ದೆಯಿಂದ ಎದ್ದು ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಆರೇಳು ಬೀದಿನಾಯಿಗಳು ಏಕಾಏಕಿ ಮಗುವಿನ ಮೇಲೆ ದಾಳಿ ನಡೆಸಿವೆ. ನಾಯಿಗಳು ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ:

ಗ್ರಾಮಸ್ಥರ ಆಕ್ರೋಶ

ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀದಿನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !