July 16, 2026
Thursday, July 16, 2026
spot_img

ಗುಜರಾತ್‌ನಲ್ಲಿ ನಡುಗಿದ ಭೂಮಿ; ಕೇವಲ 3 ನಿಮಿಷದಲ್ಲಿ ಎರಡು ಬಾರಿ ಭೂಕಂಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗುಜರಾತ್‌ನ ಕಚ್ ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಮೂರು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಲಘು ಭೂಕಂಪನಗಳು ದಾಖಲಾಗಿವೆ. ಭೂಮಿ ಕಂಪಿಸುತ್ತಿದ್ದಂತೆಯೇ ಆತಂಕಗೊಂಡ ಜನರು ತಮ್ಮ ಮನೆ ಹಾಗೂ ಅಂಗಡಿ ಮುಂಗಟ್ಟುಗಳಿಂದ ಹೊರಗೆ ಓಡಿಬಂದು ಮುಕ್ತ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

ಕಂಪನದ ತೀವ್ರತೆ

ಮಧ್ಯಾಹ್ನ 2:20 ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಇದರ ಕೇಂದ್ರಬಿಂದು ಖಾವ್ಡಾದಿಂದ ಉತ್ತರ-ಪೂರ್ವಕ್ಕೆ 32 ಕಿಲೋಮೀಟರ್ ದೂರದಲ್ಲಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ, ಅಂದರೆ ಮೂರು ನಿಮಿಷಗಳ ಬಳಿಕ ಮಧ್ಯಾಹ್ನ 2:23 ಕ್ಕೆ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.2 ರಷ್ಟು ದಾಖಲಾಗಿದ್ದು, ಧೋಲಾವೀರಾದಿಂದ ಪಶ್ಚಿಮ-ಉತ್ತರಕ್ಕೆ 32 ಕಿಲೋಮೀಟರ್ ದೂರದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.

ಇದನ್ನೂ ಓದಿ:

ಪ್ರಾಣಾಪಾಯ ಅಥವಾ ಹಾನಿಯಿಲ್ಲ

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆನ್ನುಬೆನ್ನಿಗೆ ಸಂಭವಿಸಿದ ಈ ಲಘು ಭೂಕಂಪನಗಳಿಂದಾಗಿ ಜಿಲ್ಲೆಯಲ್ಲಿ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.    ಕಚ್ ಪ್ರದೇಶವು ಭೂಕಂಪನ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ವಲಯದಲ್ಲಿದ್ದು (Seismic Zone 5), ಇಲ್ಲಿ ಇಂತಹ ಸಣ್ಣ ತೀವ್ರತೆಯ ಕಂಪನಗಳು ಆಗಾಗ ಮರುಕಳಿಸುತ್ತಿರುತ್ತವೆ ಎಂದು ತಜ್ಞರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !