September 16, 2026
Wednesday, September 16, 2026
spot_img

ವಿಧಾನಸೌಧಕ್ಕೆ ತಟ್ಟಿದ ಬರಗಾಲದ ಬಿಸಿ: ನೀರು, ವಿದ್ಯುತ್ ಜಾಸ್ತಿ ಬಳಕೆ ಮಾಡದಂತೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಸೌಧಕ್ಕೆ ಬರಗಾಲದ ಬಿಸಿ ತಟ್ಟಿದ್ದು, ಇನ್ಮುಂದೆ ನೀರು ಹಾಗೂ ವಿದ್ಯುತ್‌ನ್ನು ನಿಯಮಿತವಾಗಿ ಬಳಕೆ ಮಾಡಿ ಎಂದು ಆದೇಶಿಸಲಾಗಿದೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಯಾವ ದಿಕ್ಕಿಗೆ ಹೋದರೂ ನೀರಿಲ್ಲ. ಕಳೆದ ವಾರ ಅಲ್ಪ ಸ್ವಲ್ಪ ಮಳೆಯಾದರೂ ಯಾವುದೇ ಜಲಾಶಯಗಳು ತುಂಬುವಷ್ಟು ಒಳ ಹರಿವು ಬಂದಿಲ್ಲ. ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧ, ವಿಕಾಸಸೌಧ ಮತ್ತು ಸಚಿವಾಲಯಗಳಿಗೂ ತಟ್ಟಿದ್ದು, ನೀರು ಹಾಗೂ ವಿದ್ಯುತ್‌ ಅನ್ನು ಮಿತವಾಗಿ ಬಳಸುವಂತೆ ಎಲ್ಲ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಗಟ್ಟುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.ಪ್ರಸ್ತುತ ಹವಾಮಾನ ವೈಪರೀತ್ಯದಿಂದಾಗಿ ನೈಸರ್ಗಿಕ ಸಂಪನ್ಮೂಲಗಳ ಕೊರತೆ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ನೀರಿನಂತಹ ಅತ್ಯಮೂಲ್ಯ ಸಂಪನ್ಮೂಲಗಳನ್ನು ಅಪವ್ಯಯ ಮಾಡದೆ ಮಿತವಾಗಿ ಬಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ಆದೇಶವನ್ನು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !