Wednesday, September 10, 2025

WEATHER | ರಾಜ್ಯದ 9 ಜಿಲ್ಲೆಗಳಲ್ಲಿ ಸೆ.11ರಿಂದ ಭಾರೀ ಮಳೆ, ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದೆ, ಆದರೆ ನಾಳೆಯಿಂದ ಮತ್ತೆ ಚುರುಕಾಗಲಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. 

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೋಕರ್ಣ, ಸಿದ್ದಾಪುರ, ಕುಮಟಾ, ಹಳಿಯಾಳದಲ್ಲಿ ಮಳೆಯಾಗಿದೆ.

ಇದನ್ನೂ ಓದಿ