ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರಿನಲ್ಲಿಂದು ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆ ನಡೆಯಲಿದ್ದು 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ.
ಬೆಳಗ್ಗೆ 10:30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಈ ಕಾರಣಕ್ಕೆ ಮದ್ದೂರು, ಮಳವಳ್ಳಿ, ಮಂಡ್ಯ ತಾಲೂಕಿನಲ್ಲಿ ಇಂದು ಮದ್ಯ ಮಾರಾಟ, ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ.
ಮದ್ದೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಗಳನ್ನು ಗ್ರಾಮಕ್ಕೆ ತರುವಂತೆ ಕರೆ ನೀಡಲಾಗಿದೆ. ನಂತರ ಕಾಶಿ ವಿಶ್ವಾನಾಥ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಲಿದೆ.
ಈ ಮೆರವಣಿಗೆ ಹೊಳೆಬೀದಿ, ಪೇಟೇಬೀದಿ , ಟಿಬಿ ಸರ್ಕಲ್, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚರಿಸಿ ಕೊಲ್ಲಿ ಸರ್ಕಲ್‌ನಲ್ಲಿ ಅಂತ್ಯವಾಗಲಿದೆ. ಬಳಿಕ ಹೊಳೆ ಆಂಜನೇಯ ದೇವಾಲಯ ಬಳಿಯ ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ.