July 18, 2026
Saturday, July 18, 2026
spot_img

ವೈಷ್ಣೋದೇವಿ ದೇಣಿಗೆಯಲ್ಲಿ ಭಾರೀ ಅಕ್ರಮ?: 20 ಟನ್ ಬೆಳ್ಳಿಯ ಸುತ್ತ ಅನುಮಾನದ ಹುತ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ವೈಷ್ಣೋದೇವಿ ಮಂದಿರದಲ್ಲಿ ಭಕ್ತರು ಅರ್ಪಿಸಿದ್ದ ಬೆಳ್ಳಿ ದೇಣಿಗೆಯ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಳ್ಳಿ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಈಗ ನ್ಯಾಯಾಲಯದ ಗಮನಕ್ಕೆ ಬಂದಿದ್ದು, ತನಿಖೆ ಆರಂಭವಾಗಿದೆ.

ಬೆಳ್ಳಿ ಪರೀಕ್ಷೆಯಲ್ಲಿ ಅನುಮಾನ

ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹವಾಗಿದ್ದ ಬೆಳ್ಳಿಯ ವಸ್ತುಗಳನ್ನು ಶುದ್ಧೀಕರಣಕ್ಕಾಗಿ ಕಳುಹಿಸಿದ ವೇಳೆ ಅವುಗಳ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೆಲವು ಮಾದರಿಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಪ್ರಮಾಣದ ಬೆಳ್ಳಿ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಅಕ್ರಮದ ಶಂಕೆ

ಈ ಬೆಳವಣಿಗೆಯ ಬಳಿಕ ಭಕ್ತರು ಅರ್ಪಿಸಿದ ದೇಣಿಗೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ ಅಥವಾ ಮಧ್ಯಂತರ ಹಂತದಲ್ಲಿ ಲೋಹ ಬದಲಾವಣೆ ಆಗಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ದೂರು ಸಲ್ಲಿಸಲಾಗಿದೆ.

ಇದನ್ನೂ ಓದಿ:

ಕೋರ್ಟ್ ಮಧ್ಯಪ್ರವೇಶ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ನ್ಯಾಯಾಲಯ ತನಿಖಾ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿದ್ದು, ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ತನಿಖೆಯ ಬಳಿಕವೇ ವಾಸ್ತವಾಂಶ ಹೊರಬೀಳಲಿದೆ.

ಪಾರದರ್ಶಕತೆಗೆ ಹೊಸ ಕ್ರಮ

ವಿವಾದದ ಬೆನ್ನಲ್ಲೇ ದೇವಾಲಯ ಆಡಳಿತವು ದೇಣಿಗೆ ಸ್ವೀಕಾರ ಮತ್ತು ಪರಿಶೀಲನಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದೆ. ಇನ್ನು ಮುಂದೆ ದೇಣಿಗೆ ನಿರ್ವಹಣೆಯಲ್ಲಿ ತಂತ್ರಜ್ಞಾನ ಬಳಕೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆಗೆ ಒತ್ತು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !