ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿರುವ ರಾಜ್ಯ ಸರ್ಕಾರ, ಇದೀಗ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಸೇರಿದ ಜಮೀನಿಗೂ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಬಿಡದಿ ಟೌನ್‌ಶಿಪ್ ಜಟಾಪಟಿ ರಾಜಕೀಯವಾಗಿ ಮತ್ತಷ್ಟು ತಾರಕಕ್ಕೇರಿದೆ.
ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ. ಇದರಲ್ಲಿ ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿರುವ 31 ಎಕರೆ ಹಾಗೂ ನಿಖಿಲ್ ಕುಮಾರಸ್ವಾಮಿ ಹೆಸರಿನಲ್ಲಿರುವ 4 ಎಕರೆ ಜಮೀನು ಸೇರಿದೆ.
ಕಾಂಗ್ರೆಸ್‌ನಿಂದ ದಾಖಲೆ ವೈರಲ್:
ಹೆಚ್‌ಡಿಕೆ ಕುಟುಂಬದ ಜಮೀನಿಗೆ ಅಧಿಸೂಚನೆ ಹೊರಡಿಸಿರುವ ಆರ್‌ಟಿಸಿ ಮತ್ತು ಕಂದಾಯ ದಾಖಲೆಗಳ ಪ್ರತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಮಾಡುತ್ತಿದ್ದಾರೆ. “ರೈತರ ಭೂಮಿ ಉಳಿಸುತ್ತೇವೆ ಎನ್ನುವವರ ಸ್ವಂತ ಆಸ್ತಿಯೇ ಯೋಜನೆಗೆ ಒಳಪಟ್ಟಿದೆ” ಎಂದು ಟೀಕಿಸುತ್ತಿದ್ದಾರೆ.
ಇದನ್ನೂ ಓದಿ:
ಡಿಕೆಶಿ ಸೈಲೆಂಟ್ ಸ್ಕೆಚ್?
ಬಿಡದಿ ಟೌನ್‌ಶಿಪ್ ಯೋಜನೆಯನ್ನು ತಾವು ಸಿಎಂ ಆಗಿದ್ದಾಗ ಕೈಬಿಟ್ಟಿದ್ದಾಗಿ ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು. ಆದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಯಾವುದೇ ಆರ್ಭಟವಿಲ್ಲದೆ ಒಂದೊಂದೇ ಹಳ್ಳಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದೆ.



