July 18, 2026
Saturday, July 18, 2026
spot_img

ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ: 145ಕ್ಕೇರಿದ ಸಕ್ರಿಯ ಪ್ರಕರಣಗಳು, ಆಂಧ್ರದಲ್ಲಿ ನಾಲ್ವರು ಬ*ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಡೀ ವಿಶ್ವವನ್ನೇ ನಡುಗಿಸಿದ್ದ ಮಹಾಮಾರಿ ಕೊರೊನಾ ವೈರಸ್ ಇದೀಗ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಭೀತಿ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಹೊಸ ರೂಪಾಂತರಿ ತಳಿಯ ಆತಂಕ ಎದುರಾಗಿದೆ.

ಒಂದೇ ವಾರದಲ್ಲಿ 30 ಹೊಸ ಕೇಸ್ ಪತ್ತೆ

ರಾಜ್ಯದಲ್ಲಿ ಕಳೆದ 15 ದಿನಗಳ ಅವಧಿಯಲ್ಲಿ 62ಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜೂನ್ 22 ರಿಂದ ಜೂನ್ 28ರ ನಡುವೆ ಒಟ್ಟು 106 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 14 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಆ ಬಳಿಕ ಸೋಂಕಿನ ಪ್ರಮಾಣ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಜುಲೈ 6 ರಿಂದ ಜುಲೈ 12 ರವರೆಗಿನ ಒಂದೇ ವಾರದಲ್ಲಿ ಬರೋಬ್ಬರಿ 30 ಹೊಸ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಈ ದಿಢೀರ್ ಏರಿಕೆಯಿಂದಾಗಿ ಕರ್ನಾಟಕದಲ್ಲಿ ಸದ್ಯ ಸಕ್ರಿಯ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 145ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ:

ನೆರೆ ರಾಜ್ಯದಲ್ಲಿ ಸಾವು: ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ಇತ್ತ ಕರ್ನಾಟಕದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದರೆ, ಅತ್ತ ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಇದು ಗಡಿ ಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ ಸೇರಿದಂತೆ ಇಡೀ ರಾಜ್ಯವನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. 2020ರಲ್ಲಿ ಸೃಷ್ಟಿಯಾಗಿದ್ದ ಭೀಕರ ಪರಿಸ್ಥಿತಿಯನ್ನು ನೆನೆದು ಜನರು ಕಂಗಾಲಾಗುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !