July 18, 2026
Saturday, July 18, 2026
spot_img

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಚೆನ್ನಮ್ಮನ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಹಾಗೂ ಜೆಡಿಎಸ್‌ನ ಮಾತೃಶ್ರೀ ಚೆನ್ನಮ್ಮ (85) ಅವರ ಅಂತ್ಯಸಂಸ್ಕಾರವು ಭಾನುವಾರ (ಜುಲೈ 19) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಮಾವಿನಕೆರೆ ತೋಟದಲ್ಲಿ ನೆರವೇರಲಿದೆ.

ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

ಚೆನ್ನಮ್ಮ ಪಾರ್ಥಿವ ಶರೀರವನ್ನು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಇರಿಸಲಾಗಿದ್ದು, ಸಾರ್ವಜನಿಕ ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮವಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ ಕೊಂಡೊಯ್ಯಲಾಗುವುದು.

ಇದನ್ನೂ ಓದಿ:

ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ

ಕುಟುಂಬದ ಮೂಲಗಳ ಪ್ರಕಾರ, ಭಾನುವಾರ ಮಧ್ಯಾಹ್ನದ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹರದನಹಳ್ಳಿಯ ಮಾವಿನಕೆರೆ ಗ್ರಾಮದಲ್ಲಿರುವ ದೇವೇಗೌಡರ ತೋಟದ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !