ಹೊಸದಿಗಂತ್ ವರದಿ ಬೀದರ್
ಬೀದರ: ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾ ದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಪತ್ನಿ ಶ್ರಿಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಬೀದರ ಜಿಲ್ಲಾ ಜೆಡಿಎಸ್ ಘಟಕದಿಂದ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಜೆಡಿಎಸ್ ಮುಖಂಡರು ಬಿಡುಗಡೆ ಮಾಡಿದ ಶೋಕ ಸಂದೇಶದಲ್ಲಿ, ಚೆನ್ನಮ್ಮ ಅವರು ಎಚ್.ಡಿ. ದೇವೇಗೌಡ ಅವರ ರಾಜಕೀಯ ಹಾಗೂ ಸಾಮಾಜಿಕ ಬದುಕಿನ ಶಕ್ತಿಯಾಗಿದ್ದು, ಅವರ ನಿಧನದಿಂದ ದೇವೇಗೌಡ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಚೆನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ;
ಈ ಸಂದರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ, ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಪಕ್ಷದ ಪ್ರಮುಖ ಸೂರ್ಯಕಾಂತ್ ನಾಗಮಾರಪಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡಗೆ, ರಾಜ್ಯ ಕಾರ್ಯದರ್ಶಿ ಐಲೀನ್ ಜಾನ್ ಮಠಪತಿ, ಮುಖಂಡರುಗಳಾದ ರಾಜಶೇಖರ್ ಜವಳೆ, ಬಸವರಾಜ್ ಪಾಟೀಲ್ ಹಾರೂರಗೇರಿ, ರಾಜು ಕಡ್ಯಾಳ್, ಶಾಂತಲಿAಗ ಸಾವಳಗಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶೋಕ ಸಂತಾಪ ಸೂಚಿಸಿದ್ದಾರೆ.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ ಅವರ ಆದೇಶದ ಮೇರಗೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



