Tuesday, November 4, 2025

ಪಶುವೈದ್ಯಕೀಯ ವಿವಿ ಕರಪ್ಷನ್‌:  69 ಕಡೆ ಏಕಕಾಲದಲ್ಲಿ ಲೋಕಾ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ಕರ್ನಾಟಕದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು.

ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು ಜಿಲ್ಲೆಯ 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. 2021 ಅಕ್ಟೋಬರ್ 4ರಂದು 35 ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದರು. ಈ ಸಂಬಂಧ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ, 22 ಕೋಟಿ ಹಗರಣ ನಡೆದಿರುವುದು ಪತ್ತೆಯಾಗಿತ್ತು.

error: Content is protected !!