July 20, 2026
Monday, July 20, 2026
spot_img

ಮತ್ತೆ ಚುರುಕಾದ ವರುಣ! 5 ದಿನ ಮಳೆ ಎಚ್ಚರಿಕೆ: ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಚುರುಕುಗೊಂಡಿದ್ದಾನೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಗೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಗಾಳಿ ಹೆಚ್ಚಿರುವ ಕಾರಣ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಮಲೆನಾಡಲ್ಲೂ ಮಳೆಯ ಮುನ್ಸೂಚನೆ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲೂ ಮಳೆಯ ಸಾಧ್ಯತೆ

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !