July 21, 2026
Tuesday, July 21, 2026
spot_img

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

15 ಸಾವಿರ ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ 15,000 ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಈ ನಿರ್ಧಾರದಿಂದ ಶಿಕ್ಷಣ ಕ್ಷೇತ್ರಕ್ಕೆ ಬಲ ಸಿಗುವ ನಿರೀಕ್ಷೆಯಿದೆ.

ಇದನ್ನೂ ಓದಿ:

ಇನ್ನಿತರ ಯೋಜನೆಗಳಿಗೆ ಒಪ್ಪಿಗೆ

ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಬೆಡ್‌ಕಾಟ್ ಖರೀದಿ, ಬೆಂಗಳೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ನಿರ್ಮಾಣ, ರಸ್ತೆ ಅಭಿವೃದ್ಧಿ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆ ಮುಂದುವರಿಯಲಿದ್ದು, ಅರ್ಹ ಫಲಾನುಭವಿಗಳಿಗೆ ಹಣ ಸರಿಯಾಗಿ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದೇ ಅರ್ಹರನ್ನು ಯೋಜನೆಯಿಂದ ಕೈಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !