July 21, 2026
Tuesday, July 21, 2026
spot_img

WEATHER | ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: 2 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಸ್ವಲ್ಪ ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಾರುತಗಳು ಇದೀಗ ಮತ್ತೆ ಸಕ್ರಿಯಗೊಂಡಿವೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವರದಿ ಪ್ರಕಾರ, ಮುಂದಿನ 48 ಗಂಟೆಗಳ ಕಾಲ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಿಗೆ ಅಲರ್ಟ್!

ಜುಲೈ 20 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ತಂಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ತೀವ್ರ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಹವಾಮಾನ ವರದಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !