September 28, 2026
Monday, September 28, 2026
spot_img

ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಕಣ್ಣೀರಿನಲ್ಲಿ ಮುಳುಗಿದ ಹರದನಹಳ್ಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಸೋಮವಾರ ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ಬಳಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಸಲ್ಲಿಸಲಾಯಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ವಿಧಿವಿಧಾನದಲ್ಲಿ ಕಿರಿಯ ಪುತ್ರ ಡಾ. ರಮೇಶ್ ಅಂತ್ಯಸಂಸ್ಕಾರ ನೆರವೇರಿಸಿದರು.

ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ಅಂತ್ಯಕ್ರಿಯೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಚಿವ ಕೃಷ್ಣ ಬೈರೇಗೌಡ, ಬಸವರಾಜ ಬೊಮ್ಮಾಯಿ, ವಿ. ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರು, ಮಠಾಧೀಶರು ಮತ್ತು ಸಾವಿರಾರು ಸಾರ್ವಜನಿಕರು ಭಾಗವಹಿಸಿ ಗೌರವ ಸಲ್ಲಿಸಿದರು.

ಇದನ್ನೂ ಓದಿ:

ಭಾವುಕರಾದ ದೇವೇಗೌಡ

72 ವರ್ಷಗಳ ದಾಂಪತ್ಯ ಜೀವನದ ನೆನಪುಗಳ ನಡುವೆ ಪತ್ನಿಗೆ ಅಂತಿಮ ವಿದಾಯ ಹೇಳುವ ವೇಳೆ ದೇವೇಗೌಡ ಭಾವುಕರಾದರು. ಜಿಟಿಜಿಟಿ ಮಳೆಯ ನಡುವೆಯೂ ಸಾವಿರಾರು ಜನರು ಸೇರಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು.

Must Read