ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ಸರ್ಕಾರ ಹೊಸ ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
ಆರೋಗ್ಯ ತುರ್ತು ವ್ಯವಸ್ಥೆ ಜಾರಿ
ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆರೋಗ್ಯ ತುರ್ತು ಕಾರ್ಯಾಚರಣೆ ವ್ಯವಸ್ಥೆ (Health Emergency Operation System) ಜಾರಿಗೆ ನಿರ್ಧರಿಸಲಾಗಿದೆ. ಇದರ ಮೂಲಕ ಸೋಂಕು ಸಂಬಂಧಿತ ಮಾಹಿತಿಯನ್ನು ಎಲ್ಲ ಜಿಲ್ಲೆಗಳಿಗೆ ತ್ವರಿತವಾಗಿ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಇದನ್ನೂ ಓದಿ:
ಶಾಸಕರ ನೇತೃತ್ವದಲ್ಲಿ ಸಮಿತಿ
ಪ್ರತಿ ಹಂಗಾಮಿನಲ್ಲೂ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ, ಜಿಲ್ಲಾವಾರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸರ್ಕಾರ ಮುಂದಾಗಿದೆ.
ಶಾಲಾ ಹಂತದಲ್ಲೇ ಜಾಗೃತಿ
ಆರೋಗ್ಯಕರ ಆಹಾರ ಪದ್ಧತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಶಾಲಾ ಹಂತದಲ್ಲೇ ಉತ್ತೇಜಿಸಿದರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಸಚಿವರು ಅಭಿಪ್ರಾಯಪಟ್ಟರು.



