October 9, 2026
Friday, October 9, 2026
spot_img

ಮೈಸೂರಿನಲ್ಲಿ ದುರ್ಘಟನೆ: ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯಲ್ಲಿ ದುರ್ಘಟನೆ ನಡೆದಿದ್ದು, ಹರೀಶ್‌ ತನ್ನ ಪತ್ನಿ ಹಾಗೂ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್‌ನಲ್ಲಿ ಏನಿದೆ ಎನ್ನುವ ವಿಷಯವನ್ನು ಪೊಲೀಸರು ರಿವೀಲ್‌ ಮಾಡಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read