July 21, 2026
Tuesday, July 21, 2026
spot_img

RSS ವಿರುದ್ಧ ನಿಂದನೆ ಪ್ರಕರಣ: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಮತ್ತೊಂದು ಸಮನ್ಸ್ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮಹಮ್ಮದ್ ನಲಪಾಡ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ.

ಪೊಲೀಸ್ ವರದಿ ತಿರಸ್ಕಾರ:

ಇಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗದ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಹಮ್ಮದ್ ನಲಪಾಡ್ ಪರವಾಗಿ ಸದಾಶಿವನಗರ ಮತ್ತು ಅಶೋಕನಗರ ಠಾಣೆಯ ಪೊಲೀಸರು ಹಾಜರಾಗಿ ವರದಿಯೊಂದನ್ನು ಸಲ್ಲಿಕೆ ಮಾಡಿದ್ದರು. ಆದರೆ, ಪೊಲೀಸರು ನೀಡಿದ ವರದಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಇದು ತೃಪ್ತಿಕರವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಆಗಸ್ಟ್ 1ಕ್ಕೆ ಹಾಜರಾತಿ ಕಡ್ಡಾಯ:

ಪೊಲೀಸ್ ವರದಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಲಯವು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಹಮ್ಮದ್ ನಲಪಾಡ್ ಬರುವ ಆಗಸ್ಟ್ 01ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಿರಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿ, ಮರು ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ:

ಪ್ರಕರಣದ ಹಿನ್ನೆಲೆ:

ಕಳೆದ ವರ್ಷ ಆರ್‌ಎಸ್‌ಎಸ್ ಸಂಘಟನೆಯ ವರ್ಚಸ್ಸಿಗೆ ಧಕ್ಕೆ ತರುವ ರೀತಿಯಲ್ಲಿ ಹಾಗೂ ಸಾರ್ವಜನಿಕವಾಗಿ ನಿಂದಿಸುವ ಉದ್ದೇಶದಿಂದ ಇಬ್ಬರೂ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರುದಾರ ತೇಜಸ್ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಕೋರ್ಟ್ ಬಿಗಿ ನಿಲುವು ತಳೆದಿರುವುದರಿಂದ ಇಬ್ಬರೂ ನಾಯಕರಿಗೆ ಕಾನೂನು ಸಂಕಷ್ಟ ಎದುರಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !