October 16, 2026
Friday, October 16, 2026
spot_img

ಬೆಂಗಳೂರು-ತುಮಕೂರು ಹೈವೇಯಲ್ಲಿ ಕೆಮಿಕಲ್‌ ತುಂಬಿದ್ದ ಲಾರಿ ಪಲ್ಟಿ: ಅನಿಲ ಸೋರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಲೋರೈಡ್‌ ಕೆಮಿಕಲ್‌ ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಅನಿಲ ಸೋರಿಕೆಯಾಗಿದೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿದ್ದು, ಜನರಲ್ಲಿ ಆತಂಕ ಎದುರಾಗಿದೆ.

ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಲಾರಿ ತೆರವಿಗೆ ಕಾರ್ಯಚರಣೆ ಆರಂಭಿಸಿದ್ದಾರೆ. ಘಟನೆಯಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಭಯದಿಂದ ವಾಹನ ಸವಾರರು ಸಂಚಾರ ಮಾಡುವಂತಾಗಿದೆ.

Must Read