July 22, 2026
Wednesday, July 22, 2026
spot_img

ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ: ನಾವು ಮಾಡಿದ್ದು ತಪ್ಪು, ಕ್ಷಮಿಸಿಬಿಡಿ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ನಡೆಸಿದ್ದ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ. ನಾವು ಮಾಡಿದ್ದು ತಪ್ಪು ಎಂದು ಕೈಮುಗಿದು ಬೇಡಿಕೊಂಡಿದ್ದಾರೆ.

ಯಾರು ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇನ್ಮುಂದೆ ಯಾವತ್ತೂ ತಪ್ಪು ಮಾಡೋದಿಲ್ಲ ಎಂದು ಆರೋಪಿಗಳುಪೊಲೀಸರ ಎದುರು ಕೈಮುಗಿದು ಬೇಡಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ನಂತರದ ವಿಡಿಯೋಗಳನ್ನ ಪೊಲೀಸರು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದೆ. ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !