September 30, 2026
Wednesday, September 30, 2026
spot_img

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬೃಹತ್ ವಂಚನೆ: 152 ಪ್ರಶ್ನೆಪತ್ರಿಕೆ ಸೋರಿಕೆ ಬಹಿರಂಗ ಪಡಿಸಿದ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಕಠಿಣ ಸವಾಲನ್ನು ಎದುರಿಸುತ್ತಿದ್ದು, ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಅಕ್ರಮಗಳನ್ನು ಬಹಿರಂಗಪಡಿಸಿದರು.

152 ಪೇಪರ್ ಲೀಕ್, 7.5 ಕೋಟಿ ಕುಟುಂಬಗಳಿಗೆ ಸಂಕಷ್ಟ

ಕಳೆದ ಒಂದು ದಶಕದ ಅವಧಿಯಲ್ಲಿ ದೇಶಾದ್ಯಂತ ಸುಮಾರು 152 ಪ್ರಮುಖ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂದು ರಾಹುಲ್ ಅಂಕಿ-ಅಂಶ ಹಂಚಿಕೊಂಡಿದ್ದಾರೆ. ಈ ಸರಣಿ ಪರೀಕ್ಷಾ ಅಕ್ರಮಗಳಿಂದಾಗಿ ಕೇವಲ ಅಭ್ಯರ್ಥಿಗಳಷ್ಟೇ ಅಲ್ಲದೆ, ಅವರ ಮೇಲೆ ನಂಬಿಕೆ ಇಟ್ಟಿದ್ದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಕತ್ತಲಲ್ಲಿ ಕಳೆಯುವಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ತಪ್ಪಿತಸ್ಥರಿಗೆ ಸಿಗದ ಶಿಕ್ಷೆ: ತೀವ್ರ ಅಸಮಾಧಾನ

ಕೋಟ್ಯಂತರ ಅಭ್ಯರ್ಥಿಗಳ ಕಠಿಣ ಪರಿಶ್ರಮ ಮತ್ತು ಕನಸುಗಳು ಮಣ್ಣುಪಾಲಾಗುತ್ತಿದ್ದರೂ, ಈ ದಂದೆಯ ರೂವಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಿಲ್ಲ. ಇಷ್ಟೊಂದು ದೊಡ್ಡ ಪ್ರಮಾಣದ ಅಕ್ರಮಗಳು ಸಂಭವಿಸಿದರೂ ಇದುವರೆಗೆ ಯಾರೊಬ್ಬರಿಗೂ ತಕ್ಕ ಶಿಕ್ಷೆಯಾಗಿಲ್ಲದಿರುವುದು ಅತ್ಯಂತ ಶೋಚನೀಯ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Must Read